alex Certify ಬಿಗ್ ನ್ಯೂಸ್: ಹೋಟೆಲ್ ಆರಂಭಕ್ಕೆ ಶೀಘ್ರದಲ್ಲೇ ಗ್ರೀನ್ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಹೋಟೆಲ್ ಆರಂಭಕ್ಕೆ ಶೀಘ್ರದಲ್ಲೇ ಗ್ರೀನ್ ಸಿಗ್ನಲ್

ನಾಲ್ಕನೆ ಹಂತದ ಲಾಕ್ಡೌನ್ ಜಾರಿ ಸಂದರ್ಭದಲ್ಲಿ ಸಾಕಷ್ಟು ಸಡಿಲಿಕೆ ಗಳನ್ನು ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ಚಿತ್ರಮಂದಿರ, ಜಿಮ್, ಮಾಲ್ ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಆರಂಭವಾಗಿವೆ.

ಹೋಟೆಲ್ ಗಳ ಆರಂಭಕ್ಕೆ ಅನುಮತಿ ನೀಡಲಾಗಿದ್ದರೂ ಪಾರ್ಸೆಲ್ ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಸಾಮಾಜಿಕ ಅಂತರ ಕಾಪಾಡುವ ಷರತ್ತಿನ ಮೇಲೆ ಪೂರ್ಣ ಪ್ರಮಾಣದಲ್ಲಿ ಹೋಟೆಲ್ ತೆರೆಯಲು ಅವಕಾಶ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು.

ಇದೀಗ ಪೂರ್ಣ ಪ್ರಮಾಣದಲ್ಲಿ ಹೋಟೆಲ್ ಆರಂಭಕ್ಕೆ ಸರ್ಕಾರ ಶೀಘ್ರದಲ್ಲೇ ಗ್ರೀನ್ ಸಿಗ್ನಲ್ ನೀಡಲಿದೆ ಎಂದು ತಿಳಿದುಬಂದಿದೆ. ಬಸ್, ರೈಲು, ವಿಮಾನ ಸಂಚಾರ ಆರಂಭವಾಗುತ್ತಿರುವ ಕಾರಣ ಆಹಾರ ಹಾಗೂ ವಸತಿ ವ್ಯವಸ್ಥೆ ಅನಿವಾರ್ಯವಾಗಲಿದ್ದು, ಈ ಹಿನ್ನೆಲೆಯಲ್ಲಿ ಹೋಟೆಲ್ ಹಾಗೂ ವಸತಿಗೃಹ ಆರಂಭವಾಗಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...