alex Certify ಬಿಗ್ ನ್ಯೂಸ್: SSLC ಪರೀಕ್ಷೆ ನಡೆಸುವ ಕುರಿತಂತೆ ಶುರುವಾಗಿದೆ ಗೊಂದಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: SSLC ಪರೀಕ್ಷೆ ನಡೆಸುವ ಕುರಿತಂತೆ ಶುರುವಾಗಿದೆ ಗೊಂದಲ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ನಿಗದಿಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಸುರಕ್ಷತಾ ಕ್ರಮಗಳೊಂದಿಗೆ ಜೂನ್ 25ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಇದರ ಮಧ್ಯೆ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿರುವುದು ಸರ್ಕಾರಕ್ಕೆ ತಲೆಬಿಸಿಯನ್ನುಂಟು ಮಾಡಿದೆ. ಅಲ್ಲದೆ ಇಂತಹ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವ ಕುರಿತಂತೆ ಸಾರ್ವಜನಿಕ ವಲಯದಿಂದಲೂ ಆಕ್ಷೇಪ ವ್ಯಕ್ತವಾಗುತ್ತಿದೆ.

ಈ ಬಾರಿ 10ನೇ ತರಗತಿ ಪರೀಕ್ಷೆಯನ್ನು ಸುಮಾರು 8.4 ಲಕ್ಷ ಮಂದಿ ವಿದ್ಯಾರ್ಥಿಗಳು ಬರೆಯಲಿದ್ದು, ನಿರ್ವಹಣೆಗೆ 2ಲಕ್ಷ ಸಿಬ್ಬಂದಿಗಳನ್ನು ನೇಮಿಸಲಾಗುತ್ತದೆ. ಇವರುಗಳಿಗೆಲ್ಲ ವ್ಯವಸ್ಥಿತವಾಗಿ ಥರ್ಮಲ್ ಸ್ಕ್ರೀನಿಂಗ್ ಮಾಡಲು ಸಾಧ್ಯವೇ ಎಂಬ ಪ್ರಶ್ನೆ ಈಗ ಮೂಡಿದೆ.

ಪರೀಕ್ಷೆ ಬರೆಯುವ ಒಬ್ಬೇ ಒಬ್ಬ ವಿದ್ಯಾರ್ಥಿ ಅಥವಾ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದರೆ ನೂರಾರು ಮಂದಿಗೆ ಇದು ವ್ಯಾಪಿಸುವ ಕಾರಣ ರಿಸ್ಕ್ ತೆಗೆದುಕೊಂಡು ಪರೀಕ್ಷೆ ನಡೆಸುವುದು ಎಷ್ಟು ಸರಿ ಎಂಬ ಮಾತುಗಳು ಕೇಳಿಬರುತ್ತಿವೆ. ಅಲ್ಲದೇ ಮುಂದಿನ ದಿನಗಳಲ್ಲಿ ಕೊರೊನಾ ಮತ್ತಷ್ಟು ವ್ಯಾಪಕವಾಗಲಿದೆ ಎಂದು ತಜ್ಞರು ಹೇಳುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

ಇದರ ಮಧ್ಯೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ಹತ್ತನೇ ತರಗತಿ ಪರೀಕ್ಷೆಯನ್ನು ನಡೆಸದೆ ಪಾಸ್ ಮಾಡಲು ಹೇಗೆ ಸಾಧ್ಯ ಎಂದು ಕೆಲವರು ಕೇಳುತ್ತಿದ್ದಾರೆ. ಸರ್ಕಾರ, ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸುವುದಾಗಿ ಹೇಳಿದ್ದು, ಇದಕ್ಕೆ ಪೂರಕ ಸಿದ್ಧತೆಗಳನ್ನೂ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಈಗಾಗಲೇ ಪರೀಕ್ಷೆಗಾಗಿ ಸಿದ್ಧತೆ ನಡೆಸುತ್ತಿದ್ದು, ಪರೀಕ್ಷೆಯನ್ನು ಬರೆದು ಯಶಸ್ಸು ಗಳಿಸಲು ಸನ್ನದ್ಧರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...