ಪಕ್ಷದ ಕೆಲವು ಶಾಸಕರಲ್ಲಿ ಅಸಮಾಧಾನ ಇರುವುದು ನಿಜ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಬಹಿರಂಗವಾಗಿಯೇ ಒಪ್ಪಿಕೊಳ್ಳುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ.
ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಹೀಗಾಗಿ ಅಧಿಕಾರ ಕೇಳುವುದು ತಪ್ಪಲ್ಲ. ಕೆಲ ಶಾಸಕರು ಪ್ರತ್ಯೇಕ ಸಭೆ ನಡೆಸಿ ತಮ್ಮ ಅಸಮಾಧಾನ ತೋರ್ಪಡಿಸಿಕೊಂಡಿದ್ದಾರೆ ಎಂದು ಹೇಳಿದರು.
ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅಸಮಾಧಾನಗೊಂಡಿರುವ ಶಾಸಕರುಗಳ ಜೊತೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಲಿದ್ದಾರೆ ಎಂದು ಹೇಳಿದ ಸಚಿವ ಈಶ್ವರಪ್ಪ, ಅಸಮಾಧಾನ ಶೀಘ್ರದಲ್ಲೇ ಬಗೆಹರಿಯುತ್ತದೆ ಎಂದು ತಿಳಿಸಿದ್ದಾರೆ.