alex Certify ಬಿಗ್ ಬ್ರೇಕಿಂಗ್: ಪಕ್ಷದಲ್ಲಿ ಅಸಮಾಧಾನವಿರುವುದನ್ನು ಬಹಿರಂಗವಾಗಿಯೇ ಒಪ್ಪಿಕೊಂಡು ಅಚ್ಚರಿ ಮೂಡಿಸಿದ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ಬ್ರೇಕಿಂಗ್: ಪಕ್ಷದಲ್ಲಿ ಅಸಮಾಧಾನವಿರುವುದನ್ನು ಬಹಿರಂಗವಾಗಿಯೇ ಒಪ್ಪಿಕೊಂಡು ಅಚ್ಚರಿ ಮೂಡಿಸಿದ ಸಚಿವ

ಪಕ್ಷದ ಕೆಲವು ಶಾಸಕರಲ್ಲಿ ಅಸಮಾಧಾನ ಇರುವುದು ನಿಜ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಬಹಿರಂಗವಾಗಿಯೇ ಒಪ್ಪಿಕೊಳ್ಳುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಹೀಗಾಗಿ ಅಧಿಕಾರ ಕೇಳುವುದು ತಪ್ಪಲ್ಲ. ಕೆಲ ಶಾಸಕರು ಪ್ರತ್ಯೇಕ ಸಭೆ ನಡೆಸಿ ತಮ್ಮ ಅಸಮಾಧಾನ ತೋರ್ಪಡಿಸಿಕೊಂಡಿದ್ದಾರೆ ಎಂದು ಹೇಳಿದರು.

ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅಸಮಾಧಾನಗೊಂಡಿರುವ ಶಾಸಕರುಗಳ ಜೊತೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಲಿದ್ದಾರೆ ಎಂದು ಹೇಳಿದ ಸಚಿವ ಈಶ್ವರಪ್ಪ, ಅಸಮಾಧಾನ ಶೀಘ್ರದಲ್ಲೇ ಬಗೆಹರಿಯುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...