ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಅದರಲ್ಲೂ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದವರಿಗೂ ಸಹ ಈ ಮಹಾಮಾರಿ ವಕ್ಕರಿಸಿಕೊಂಡಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕೊರೊನಾ ಅಬ್ಬರಿಸುತ್ತಿದ್ದು, ಭಾನುವಾರ ಒಂದೇ ದಿನ 196 ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿವೆ. ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಟ್ಟಿದ್ದ ಬೆಂಗಳೂರಿನ ಎಲ್ಲ ಆಸ್ಪತ್ರೆಗಳು ಸೋಂಕು ಪೀಡಿತರಿಂದ ಭರ್ತಿಯಾಗಿದ್ದು, ಮುಂದಿನ ದಿನಗಳು ಮತ್ತಷ್ಟು ಭಯಾನಕವಾಗಲಿದೆ ಎಂದು ಹೇಳಲಾಗುತ್ತಿದೆ.
ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದವರಿಗೂ ಸಹ ಈ ಸೋಂಕು ವ್ಯಾಪಿಸುತ್ತಿರುವುದರಿಂದ ಈಗಾಗಲೇ ಸಮುದಾಯಕ್ಕೂ ಕೊರೊನಾ ಹಬ್ಬಿದೆಯಾ ಎಂಬ ಸಂಶಯಕ್ಕೆ ಕಾರಣವಾಗಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸದಿದ್ದಲ್ಲಿ ಬಹಳಷ್ಟು ಸಂಕಷ್ಟ ಎದುರಿಸಬೇಕಾಗುತ್ತದೆ.