
ಬೆಂಗಳೂರು: ವೋಟರ್ ಐಡಿ ಪಡೆದು ಹಣ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನ.3ರಂದು ಆರ್.ಆರ್.ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಮತದಾರರಿಂದ ವೋಟರ್ ಐಡಿ ಪಡೆದು, ಸಾವಿರಾರು ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ
ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಕಾಂಗ್ರೆಸ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.