alex Certify ಬೆಂಗಳೂರಿಗರಿಗೆ ಖಾಕಿ ಬಿಗ್ ಶಾಕ್: ರಸ್ತೆಗಿಳಿದರೆ ಹುಷಾರ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರಿಗೆ ಖಾಕಿ ಬಿಗ್ ಶಾಕ್: ರಸ್ತೆಗಿಳಿದರೆ ಹುಷಾರ್…!

ಬೆಂಗಳೂರು: ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಟಫ್ ರೂಲ್ಸ್ ಜಾರಿಯಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಫೀಲ್ಡಿಗಿಳಿದ ಪೊಲೀಸರು ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ.

ಬೆಳಿಗ್ಗೆ 6ಗಂಟೆಯಿಂದ 10 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿ ಮಾಡಲಾಗಿತ್ತು ಆದರೆ ಈ ಸಮಯದಲ್ಲೂ ಅನಗತ್ಯ ಓಡಾಟ ನಡೆಸದಂತೆ ಸೂಚನೆ ನೀಡಲಾಗಿತ್ತು. ಆದಾಗ್ಯೂ ಜನರು ನಿಯಮ ಉಲ್ಲಂಘಿಸಿ ರಸ್ತೆಗಳಲ್ಲಿ ಬೇಕಾಬಿಟ್ಟಿ ಓಡಾಟ ನಡೆಸಿ ವಾಹನಗಳಲ್ಲಿ ಸಂಚರಿಸಿ ಬೇಜವಾಬ್ದಾರಿ ಮೆರೆದಿದ್ದಾರೆ.

ಕೊರೋನಾ ಕಂಟ್ರೋಲ್ ಗೆ ಮತ್ತೊಂದು ಕ್ರಮ: ಮದುವೆಗೆ 50 ಜನ ಮಾತ್ರ ಭಾಗವಹಿಸಿರುವುದನ್ನು ಗುರುತಿಸಲು ಕೈಗೆ ಬ್ಯಾಂಡ್

ನಿಯಮ ಉಲ್ಲಂಘಿಸಿ ಓಡಾಡುತ್ತಿದ್ದ ಇಂಥವರ ವಿರುದ್ಧ ಕ್ರಮ ಕೈಗೊಂಡಿರುವ ಪೊಲೀಸರು 93 ಬೈಕ್, 9 ಕಾರು, 3 ಆಟೋ ಸೇರಿದಂತೆ ಒಟ್ಟು 105 ವಾಹನಗಳನ್ನು ಸೀಜ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...