alex Certify ಬೆಂಗಳೂರಿಗೆ ಶರಾವತಿ ನೀರನ್ನು ಕೊಂಡೊಯ್ಯುವ ಪ್ರಶ್ನೆಯೇ ಇಲ್ಲ: ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಶರಾವತಿ ನೀರನ್ನು ಕೊಂಡೊಯ್ಯುವ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

ರಾಜ್ಯ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಸಲುವಾಗಿ ಶಿವಮೊಗ್ಗ ಜಿಲ್ಲೆಯ ಶರಾವತಿ ನೀರನ್ನು ತೆಗೆದುಕೊಂಡು ಹೋಗುವ ಕುರಿತಂತೆ ಹಿಂದೆ ಪ್ರಸ್ತಾವನೆ ಮಾಡಲಾಗಿತ್ತು.

ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಪ್ರಶ್ನೆಯೇ ಇಲ್ಲ. ಅದೊಂದು ಹುಚ್ಚುತನದ ಯೋಜನೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಈ ಕುರಿತು ಮಾತನಾಡಿದ ಅವರು, ಯಾರು ಈ ಹಿಂದೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೋ ನನಗೆ ಗೊತ್ತಿಲ್ಲ. ಆದರೆ ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಇದಕ್ಕೆ ಅನುವು ಮಾಡಿಕೊಡುವುದಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...