ಬೆಂಗಳೂರು: ಸಾರಿಗೆ ನೌಕರರು ನಾಳೆ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ ಮುಷ್ಕರ ಹತ್ತಿಕ್ಕಲು ನಿರ್ಧರಿಸಿರುವ ಸರ್ಕಾರ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ. ಈ ನಡುವೆ ಸಿ ಆರ್ ಪಿ ಸಿ ಸೆಕ್ಷನ್ 144 ಪ್ರಕಾರ ಪ್ರತಿಭಟನೆಗಳಿಗೆ ಅವಕಾಶವಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಕೋವಿಡ್ ನಿಯಮದ ಪ್ರಕಾರ ನಗರದ ಕಮಿಷ್ನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಸಿ ಆರ್ ಪಿ ಸಿ ಸೆಕ್ಷನ್ 144 ಪ್ರಕಾರ ಪ್ರತಿಭಟನೆಗಳಿಗೆ ಅವಕಾಶವಿಲ್ಲ. ಹಾಗಾಗಿ ಸಾರಿಗೆ ನೌಕರರು ನಿಯಮಗಳನ್ನು ಮೀರಿ ಮುಷ್ಕರಕ್ಕೆ ಮುಂದಾದರೆ ಬಂಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಸಾರ್ವಜನಿಕರಿಗೆ ಯಾವುದೇ ರೀತಿ ಸಮಸ್ಯೆಗಳು ಆಗದಂತೆ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸುವವರನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಬಿಎಂಟಿಸಿ ಬಸ್ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಪೊಲೀಸ್ ಭದ್ರತೆ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.