ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಎನ್ಐಎ ಅಧಿಕಾರಿಗಳು ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಶಂಕಿತರ ವಿರುದ್ಧ ಎನ್ಐಎ ಅಧಿಕಾರಿಗಳು ಸುಮೊಟೋ ಕೇಸ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಗಳು ಬೆಂಗಳೂರಿನ ಫ್ರೆಜರ್ ಟೌನ್ ನಿವಾಸಿ ಇರ್ಫಾನ್ ನಾಸಿರ್(33) ಹಾಗೂ ತಮಿಳುನಾಡು ಮೂಲದ ಅಹಮದ್ ಅಬ್ದುಲ್ ಖಾದರ್ (40) ಎಂದು ಗುರುತಿಸಲಾಗಿದೆ.
ಇತ್ತೀಚೆಗೆ ಎನ್ಐಎಯಿಂದ ಬಂಧಿಸಲ್ಪಟ್ಟ ಅಬ್ದುಲ್ ರೆಹಮಾನ್ ಅಲಿಯಾಸ್ ಡಾ.ಬ್ರೇವ್ ವಿಚಾರಣೆ ವೇಳೆ ಈ ಇಬ್ಬರ ಹೆಸರನ್ನು ಬಾಯ್ಬಿಟ್ಟಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.