ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಈ ನಡುವೆ ಬೆಂಗಳೂರಿನ ದಕ್ಷಿಣ ವಲಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಣದ ಬಗ್ಗೆ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು ದಕ್ಷಿಣ ಭಾಗದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಂದು ಆ ಭಾಗದ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಎಷ್ಟು ಪ್ರಮಾಣದ ಟೆಸ್ಟ್‌ಗಳಾಗಿವೆ, ಸೋಂಕು ನಿಯಂತ್ರಣಕ್ಕೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಮಾಹಿತಿ ಪಡೆದು ಸೋಂಕು ನಿಯಂತ್ರಣಕ್ಕೆ ಬಿಗಿ ಕ್ರಮಕ್ಕೆ ಸೂಚಿಸುತ್ತೇನೆ ಎಂದಿದ್ದಾರೆ.
ನಿನ್ನೆ ರಾಜ್ಯದಲ್ಲಿ 5,851 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಅದರಲ್ಲೂ ಬೆಂಗಳೂರು ಗ್ರಾಮಾಂತರ 35, ಬೆಂಗಳೂರು ನಗರ 1918 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಸಚಿವರು ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.