ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಬೆಡ್ ಬ್ಲಾಕಿಂಗ್ ಪ್ರಕರಣ ಸಂಬಂಧ ಇಂದು ಸಪ್ತಗಿರಿ ಆಸ್ಪತ್ರೆಯ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಂಟೊನಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ರೋಗಿಗಳಿಂದ ಹಣ ಪಡೆದು ಬೆಡ್ ಬುಕ್ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು.
ನಿಗದಿಯಾಗಿದ್ದ ಮದುವೆ ಮುರಿಯುವಂತೆ ಮಾಡಿದೆ ದುಬಾರಿ ಉಂಗುರ…!
ಪ್ರಕರಣದಲ್ಲಿ ಈವರೆಗೆ ಸಿಸಿಬಿ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.