ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಇದೀಗ ಲಾಕ್ಡೌನ್ ಸಡಿಲಿಕೆ ಆಗಿದ್ದು, ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಇದರ ಮಧ್ಯೆ ಭತ್ತದ ಬೆಲೆ ಕುಸಿತ ಕಂಡಿದ್ದರಿಂದ ಬೆಳೆಗಾರರು ಆತಂಕಗೊಂಡಿದ್ದರು.
ಇದೀಗ ರಾಜ್ಯ ಸರ್ಕಾರ ಭತ್ತ ಬೆಳೆದ ರೈತರಿಗೆ ನೆಮ್ಮದಿಯ ಸುದ್ದಿಯೊಂದನ್ನು ನೀಡಿದ್ದು, ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಪ್ರಕ್ರಿಯೆಯನ್ನು ಜೂನ್ 30ರವರೆಗೆ ಮುಂದುವರಿಸಿ ಆದೇಶ ಹೊರಡಿಸಲಾಗಿದೆ. ಇದರಿಂದಾಗಿ ಕಂಗೆಟ್ಟಿದ್ದ ರೈತರಿಗೆ ನೆಮ್ಮದಿ ಸಿಕ್ಕಂತಾಗಿದೆ.
ಸರ್ಕಾರದ ಸುತ್ತೋಲೆ ಪ್ರಕಾರ ಜೂನ್ 15ರವರೆಗೆ ರೈತರ ನೋಂದಣಿ ಕಾರ್ಯ ಹಾಗೂ ಜೂನ್ 30ರವರೆಗೆ ಖರೀದಿ ಪ್ರಕ್ರಿಯೆ ಮುಂದುವರೆಸುವಂತೆ ಸೂಚಿಸಲಾಗಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭತ್ತ ಬೆಳೆದಿದ್ದು, ಕಟಾವು ನಡೆದ ಸಂದರ್ಭದಲ್ಲಿ ಬೆಲೆ ಕುಸಿತವಾಗಿದ್ದರಿಂದ ಆತಂಕವಾಗಿತ್ತು. ಸರ್ಕಾರದ ಈ ತೀರ್ಮಾನ ರೈತ ಸಮುದಾಯಕ್ಕೆ ಸಂತಸ ತಂದಿದೆ.