ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾನ ಬಿರುಸಿನಿಂದ ಸಾಗಿದ್ದು, ಈ ನಡುವೆ ಕೊರೊನಾ ಸೋಂಕಿನಿಂದ ಬಳಲುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಂಚೆ ಮತದಾನ ಮಾಡಿದ್ದಾರೆ.
ಕೊರೊನಾ ಸೋಂಕಿತರಿಗೆ ಚುನಾವಣಾ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಎರಡು ದಿನಗಳ ಹಿಂದೆಯೇ ಅಂಚೆ ಮತದಾನದ ಮೂಲಕ ಹಕ್ಕು ಚಲಾಯಿಸಿದ್ದಾರೆ ಎಂದು ತಿಳಿದುಬಂದಿದೆ.
ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವ ಸರ್ಕಾರಿ ನೌಕರರಿಗೆ ಭರ್ಜರಿ ʼಬಂಪರ್ʼ ಸುದ್ದಿ
ಸಿಡಿ ಕೇಸ್ ನಲ್ಲಿ ಸಿಲುಕಿರುವ ರಮೇಶ್ ಜಾರಕಿಹೊಳಿ ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಚೇತರಿಸಿಕೊಳ್ಳುತ್ತಿರುವ ಜಾರಕಿಹೊಳಿ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಹೀಗಾಗಿ ಅಂಚೆ ಮತದಾನದ ಮೂಲಕ ಹಕ್ಕು ಚಲಾಯಿಸಿದ್ದಾರೆ.