ಬೆಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಬೇಸಿಗೆ ರಜೆ ಅವಧಿ ಪರಿಷ್ಕರಣೆ ಮಾಡಿ ಸುತ್ತೋಲೆ ಹೊರಡಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪ್ರಾಥಮಿಕ ಶಾಲೆಗಳಿಗೆ ಜೂನ್ 14ರವರೆಗೆ ರಜೆ ಘೋಷಿಸಲಾಗಿದೆ. ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 15ರಿಂದ 8 ಮತ್ತು 9ನೇ ತರಗತಿಗಳು ಆರಭವಾಗುತ್ತವೆ ಎಂದು ತಿಳಿಸಿದರು.
ಹಾಸನ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಣೆ
ಪ್ರೌಢಶಾಲಾ ಶಿಕ್ಷಕರು ರಜೆ ಅವಧಿಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆ ಬಗ್ಗೆ ಗಮನ ಹರಿಸಬೇಕು. ಜೂನ್ 1ರಿಂದ 14ರವರೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪುನರ್ ಮನನ ತರಗತಿಗಳು ಆರಂಭವಾಗುತ್ತವೆ ಎಂದು ಹೇಳಿದ್ದಾರೆ.