alex Certify ಬೈಕ್ ವ್ಹೀಲಿಂಗ್ ಮಾಡುತ್ತಿದ್ದ 16 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ವ್ಹೀಲಿಂಗ್ ಮಾಡುತ್ತಿದ್ದ 16 ಮಂದಿ ಅರೆಸ್ಟ್

ಬೆಂಗಳೂರು: ಪೊಲೀಸರು ಎಷ್ಟೇ ಕ್ರಮಗಳನ್ನು ಕೈಗೊಂಡರೂ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಬೈಕ್ ವ್ಹೀಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಕೆ.ಆರ್.ಪುರ, ಬ್ಯಾಟರಾಯನಪುರ, ಹೆಬ್ಬಾಳ, ಬಸವನಗುಡಿ ಠಾಣೆ ಪೊಲೀಸರು ಒಂದು ವಾರದಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ 16 ಯುವಕರನ್ನು ಬಂಧಿಸಿದ್ದಾರೆ.

ವ್ಹೀಲಿಂಗ್ ಮಾಡಬೇಕಾದರೆ ಹೆಚ್ಚು ಸೌಂಡ್ ಬರಲೆಂದು ಸೈಲೆನ್ಸರ್ ಪೋರ್ಟ್ ಮಾಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೈಲೆನ್ಸರ್ ಅಂಗಡಿ ಮೇಲೆ ಕೂಡ ಪ್ರಕರಣ ದಾಖಲಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...