alex Certify ಸೆಲ್ಫಿ ವಿಡಿಯೋ ಮಾಡಿ ನಟಿ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಲ್ಫಿ ವಿಡಿಯೋ ಮಾಡಿ ನಟಿ ಆತ್ಮಹತ್ಯೆಗೆ ಶರಣು

ಹಲವು ಜಾಹೀರಾತುಗಳಲ್ಲಿ ರೂಪದರ್ಶಿಯಾಗಿ ಕಾಣಿಸಿಕೊಂಡಿದ್ದ ನಟಿ ಚಂದನಾ, ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

29 ವರ್ಷದ ಚಂದನಾ ಪ್ರಿಯಕರನಿಂದ ಮೋಸಕ್ಕೊಳಗಾಗಿದ್ದು, ಈ ಹಿನ್ನಲೆಯಲ್ಲಿ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ದಿನೇಶ್‌ ಎಂಬಾತನನ್ನು ಐದು ವರ್ಷಗಳಿಂದ ಚಂದನಾ ಪ್ರೀತಿಸುತ್ತಿದ್ದು, ಆತ ಮದುವೆಯಾಗುವುದಾಗಿ ನಂಬಿಸಿ ಚಂದನಾಳನ್ನು ಬಳಸಿಕೊಂಡಿದ್ದಲ್ಲದೇ ಜೊತೆಗೆ ಹಣವನ್ನೂ ಪೀಕಿಕೊಂಡಿದ್ದನೆನ್ನಲಾಗಿದೆ.

ಇತ್ತೀಚಿನ ದಿನಗಳಲ್ಲಿ ದಿನೇಶ್‌ ತನ್ನನ್ನು ನಿರ್ಲಕ್ಷಿಸುತ್ತಿದ್ದಾನೆಂಬ ಭಾವನೆ ಹೊಂದಿದ್ದ ಚಂದನಾ ಈಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ದಿನೇಶ್‌ ಬಂಧನಕ್ಕೆ ಬಲೆ ಬೀಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...