ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸಾರ್ವತ್ರಿಕ ವರ್ಗಾವಣೆಗೆ ಬ್ರೇಕ್ ಹಾಕಲಾಗಿದ್ದು, ವಿಶೇಷ ಪ್ರಕರಣಗಳಲ್ಲಿ ಮುಖ್ಯಮಂತ್ರಿಗಳ ಅನುಮೋದನೆಯೊಂದಿಗೆ ವರ್ಗಾವಣೆ ಮಾಡಬಹುದೆಂದು ತಿಳಿಸಲಾಗಿದೆ.
ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಇದರಿಂದಾಗಿ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಇದರ ಪರಿಣಾಮ ಸರ್ಕಾರಕ್ಕೆ ಆದಾಯದ ಕೊರತೆಯಾಗಿದ್ದು, ಮಿತವ್ಯಯ ಸಾಧಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.
ಅಲ್ಲದೇ ಬಹಳಷ್ಟು ಸರ್ಕಾರಿ ನೌಕರರು ಕೋವಿಡ್ 19 ಕಾರ್ಯಗಳಲ್ಲಿ ತೊಡಗಿದ್ದು, ವರ್ಗಾವಣೆಯಿಂದ ಆ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತದೆಂಬ ಕಾರಣಕ್ಕೂ ಈ ನಿರ್ಧಾರಕ್ಕೆ ಬರಲಾಗಿದೆ.