ಬೆಳಗಾವಿ; ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದ ಯುವಕರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರಾಜ್ಯೋತ್ಸವ ಆಚರಿಸಲು ಯುವಕರು ಗುಂಪು ಗುಂಪಾಗಿ ಸೇರಿದ್ದರು. ಈ ವೇಳೆ ಪೊಲೀಸರು ಯುವಕರ ಮೇಲೆ ಲಾಠಿಚಾರ್ಜ್ ಮಾಡಿ ಎಲ್ಲರನ್ನೂ ಸ್ಥಳದಿದ್ದ ಕಳುಹಿಸಿದ್ದಾರೆ. ಪೊಲೀಸರ ಲಾಠಿ ಏಟಿಗೆ ಹೆದರಿ ಸಾರ್ವಜನಿಕರು ಕೂಡ ದಿಕ್ಕಾಪಾಲಾಗಿ ಓಡಿದ್ದಾರೆ.
ಪೊಲೀಸರ ಕ್ರಮ ಖಂಡಿಸಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪೊಲೀಸರು ಹಾಗೂ ಜಿಲ್ಲಾಡಳಿತ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.