alex Certify ಬ್ರೇಕಿಂಗ್ ನ್ಯೂಸ್: ಕೊರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೇಕಿಂಗ್ ನ್ಯೂಸ್: ಕೊರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ

ಬೆಂಗಳೂರು: ಕೊರೊನಾ ಮಹಾಮಾರಿ ನಡುವೆಯೂ ನ.3ರಂದು ಶಿರಾ ಹಾಗೂ ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಚುನಾವಣಾ ಅಖಾಡ ರಂಗೇರಿದೆ. ಆರ್.ಆರ್. ನಗರ ಕ್ಷೇತ್ರದಲ್ಲಿ ಕೊರೊನಾ ಸೋಂಕಿತರಿಗೂ ಮತದಾನ ಮಾಡಲು ಸಿದ್ಧತೆ ನಡೆಸಲಾಗಿದೆ.

ಆರ್.ಆರ್. ನಗರ ಕ್ಷೇತ್ರದಲ್ಲಿ 10 ಸಾವಿರಕ್ಕೂ ಹೆಚ್ಚು ಕೋವಿಡ್ ಸೋಂಕಿತರಿದ್ದು, ಉಪಚುನಾವಣೆಯಲ್ಲಿ ಅವರಿಗೂ ಕೂಡ ಮತ ಚಲಾವಣೆಗೆ ಅವಕಾಶ ನೀಡಲಾಗುತ್ತಿದೆ. ಕೊರೊನಾ ಸೋಂಕಿತರಿಗಾಗಿಯೇ ಪ್ರತ್ಯೇಕ ಬೂತ್ ವ್ಯವಸ್ಥೆ ಕಲ್ಪಿಸಲು ಬಿಬಿಎಂಪಿ ಮುಂದಾಗಿದೆ.

ಕೊರೊನಾ ಸೋಂಕಿತರನ್ನು ಆಂಬ್ಯುಲೆನ್ಸ್ ಮೂಲಕ ಕರೆತಂದು ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಅಲ್ಲದೇ ಕೊರೊನಾ ಸೋಂಕಿತರಿಗಾಗಿ ಸ್ಥಾಪಿಸಲಾಗುವ ಪ್ರತ್ಯೇಕ ಬೂತ್ ನಲ್ಲಿ ಕಾರ್ಯನಿರ್ವಹಿಸುವ ಚುನಾವಣಾ ಸಿಬ್ಬಂದಿಗಳಿಗೆ ಪಿಪಿಇ ಕಿಟ್ ವ್ಯವಸ್ಥೆ ಸೇರಿದಂತೆ ಹಲವು ಮುಂಜಾಗೃತಾ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...