ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಧಾರವಾಡ ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ.
ಕಳೆದ ಮೂರು ದಿನಗಳಿಂದ ಸಿಬಿಐ ಕಸ್ಟಡಿಯಲ್ಲಿದ್ದ ವಿನಯ್ ಕುಲಕರ್ಣಿ ಅವರನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ನ.23ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.