ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಗೆ ಕಾರ್ಖಾನೆ ಗೋಡೆ ಕುಸಿದು ಬಿದ್ದಿದ್ದು, ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಭಾರೀ ಮಳೆಗೆ ಇಸ್ಕಾನ್ ಬಳಿಯ ಕಾರ್ಖಾನೆಯೊಂದರ ಗೋಡೆ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಬಿಹಾರ ಮೂಲದ ಕಾರ್ಮಿಕ ಪೂರಂಪೂಜಾರಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.