alex Certify ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ದಂಪತಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ದಂಪತಿ ದುರ್ಮರಣ

ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ಮಗು ತಂದೆ-ತಾಯಿ ಸೇರಿದಂತೆ ಮೂವರು ಬಲಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಸಂಗನಕೇರಿ ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ಕಬ್ಬು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.

ಮೃತರು ರಾಯಭಾಗದ ಹಿಡಕಲ್ ಗ್ರಾಮದವರಾಗಿದ್ದು, ಪತಿ-ಪತ್ನಿ ಹಾಗೂ ಐದು ತಿಂಗಳ ಮಗು ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...