alex Certify ಮಂಗಳಮುಖಿಯರಿಗೆ ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳಮುಖಿಯರಿಗೆ ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಮಂಗಳಮುಖಿಯರಿಗೆ ಸಿಹಿ ಸುದ್ದಿ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಸರ್ಕಾರಿ ನೇಮಕಾತಿಗಳಲ್ಲಿ ಮಂಗಳಮುಖಿಯರಿಗೆ ಮೀಸಲು ಕಲ್ಪಿಸುವ ಸಂಬಂಧ ಕರಡು ನಿಯಮ ಸಿದ್ಧವಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆಗೊಳ್ಳುವ ನಿರೀಕ್ಷೆಯಿದೆ.

ರಾಜ್ಯ ಹೈಕೋರ್ಟ್ ಗೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಈ ವಿಷಯ ತಿಳಿಸಿದ್ದು, ‘ಟ್ರಾನ್ಸ್ಜೆಂಡರ್ ನೀತಿ 2017’ರ ಕರಡನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲು ಮುಂದಾಗಿದ್ದರೂ ಅದು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಹೀಗಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕರಡು ನಿಯಮ ಅನುಮೋದನೆಗೊಳ್ಳುವುದು ಬಹುತೇಕ ನಿಶ್ಚಿತವಾಗಿದೆ. ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಯೊಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಗೆ ಅಡ್ವೋಕೇಟ್ ಜನರಲ್ ಈ ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...