ಮಂಗಳವಾರ ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸ್ಪೋಟವಾಗಿದೆ 24 ಗಂಟೆ ಅವಧಿಯಲ್ಲಿ 10,453 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಇದೇ ಮೊದಲ ಬಾರಿಗೆ 10000ಕ್ಕೂ ಅಧಿಕ ಪ್ರಕರಣಗಳು ರಾಜ್ಯದಲ್ಲಿ ದಾಖಲಾದಂತಾಗಿದೆ.
ಅಲ್ಲದೆ 12 ಜಿಲ್ಲೆಗಳಲ್ಲಿ ಕೊರೊನಾ ವ್ಯಾಪಕವಾಗಿ ಏರಿಕೆಯಾಗತೊಡಗಿದ್ದು, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಹಾಸನ, ತುಮಕೂರು, ಗದಗ, ಶಿವಮೊಗ್ಗ, ಬೆಂಗಳೂರು ನಗರ, ಬೆಳಗಾವಿ, ಉಡುಪಿ, ಹಾವೇರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗತೊಡಗಿದೆ.
ಜೊತೆಗೆ ಸಾಂಕ್ರಾಮಿಕ ರೋಗ ಲಕ್ಷಣ ಇರುವವರಲ್ಲೂ ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಭೆ-ಸಮಾರಂಭಗಳ ಮೇಲೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.