ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಆರಂಭವಾಗಲಿದ್ದು, ಹೆಸರು ಸೇರ್ಪಡೆ, ತಿದ್ದುಪಡಿ ಕುರಿತಂತೆ ಮಹತ್ವದ ಮಾಹಿತಿ ಇಲ್ಲಿದೆ. ಚುನಾವಣಾ ಆಯೋಗ ಈ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಿದ್ದು, 2021ರ ಜನವರಿ 15ರಂದು ಅಂತಿಮ ಪಟ್ಟಿ ಪ್ರಕಟಿಸಲಿದೆ.
ನವೆಂಬರ್ 1 ರಿಂದ ನವೆಂಬರ್ 15 ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, ಕರಡು ಮತದಾರರ ಪಟ್ಟಿ ನವೆಂಬರ್ 16ರಂದು ಪ್ರಕಟವಾಗಲಿದೆ. ಇದನ್ನು ಪರಿಶೀಲಿಸಿ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 16 ರಿಂದ ಡಿಸೆಂಬರ್ 15ರ ವರೆಗೆ ಸಲ್ಲಿಸಬಹುದಾಗಿದೆ.
2021ರ ಜನವರಿ 1ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಲು ಅರ್ಹರಾಗಿದ್ದು, ವಿಧಾನಸಭಾ ಕ್ಷೇತ್ರದಲ್ಲಿ ವಾಸಿಸುತ್ತಿರುವ ದಾಖಲೆಗಳೊಂದಿಗೆ ಹೆಸರು ಸೇರ್ಪಡೆಗೆ ಮನವಿ ಸಲ್ಲಿಸಬಹುದಾಗಿದೆ.