ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಜೂನ್ 7ರ ಬಳಿಕವೂ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ತಜ್ಞರು ಹಾಗೂ ಅಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ.
‘ಆಕಾಂಕ್ಷಾ’ ಪೋರ್ಟಲ್ ಗೆ ಸಿಎಂ ಯಡಿಯೂರಪ್ಪ ಚಾಲನೆ; ಇಲ್ಲಿದೆ ಮಹತ್ವದ ಮಾಹಿತಿ
ರಾಜ್ಯದಲ್ಲಿ ಕೊರೊನಾ ಚೈನ್ ಲಿಂಕ್ ಬ್ರೇಕ್ ಮಾಡಲು ಹಾಗೂ ಸಾವು-ನೋವಿನ ಸಂಖ್ಯೆ ಕಡಿಮೆಯಾಗಬೇಕೆಂದರೆ ಇನ್ನಷ್ಟು ದಿನಗಳ ಕಾಲ ಲಾಕ್ ಡೌನ್ ಅನಿವಾರ್ಯ ಎಂಬ ಅಭಿಪ್ರಾಯವನ್ನು ಸಚಿವರು ಹಾಗೂ ಅಧಿಕಾರಿಗಳು ಕೂಡ ವ್ಯಕ್ತಪಡಿಸುತ್ತಿದಾರೆ.
ಪ್ರಸವ ವೇದನೆಯಲ್ಲಿದ್ದ ಮಹಿಳೆಗೆ ’ಮೀಟಿಂಗ್ ಮುಗಿಸಿ ಹೋಗಿ’ ಎಂದ ಉದ್ಯಮಿ
ಪ್ರಸ್ತುತ ಲಾಕ್ ಡೌನ್ ಜಾರಿಯಿಂದಾಗಿಯೇ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಮುಖವಾಗಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆ. ಈಗಲೇ ಲಾಕ್ ಡೌನ್ ತೆರವು ಮಾಡಿದರೆ ರಾಜ್ಯದಲ್ಲಿ ಮತ್ತೆ ಸೋಂಕಿತರ ಸಂಖ್ಯೆ ಏರಿಕೆಯಾಗಲಿದೆ.
ಅಲ್ಲದೇ ಕೊರೊನಾ 3ನೇ ಅಲೆಯನ್ನು ತಡೆಯಬೇಕೆಂದರೆ ಲಾಕ್ ಡೌನ್ ವಿಸ್ತರಣೆ ಮಾಡುವುದು ಉತ್ತಮ ಎಂದು ಸರ್ಕಾರಕ್ಕೆ ಸಲಹೆಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಜೂನ್ 7ರ ಬಳಿಕವೂ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಯಾಗಲಿದೆಯೇ ಕಾದುನೋಡಬೇಕಿದೆ.