ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಕೆಲವು ದಿನಗಳಿಂದ ತಮ್ಮ ಹೇಳಿಕೆಗಳ ಕಾರಣಕ್ಕೆ ಪದೇ ಪದೇ ಸುದ್ದಿಯಾಗುತ್ತಿದ್ದಾರೆ. ಗೋಮಾಂಸ ಕುರಿತ ಅವರ ನಿಲುವು, ಹನುಮ ಜಯಂತಿಯಂದು ಮಾಂಸ ಸೇವಿಸಿದ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಸಿದ್ದರಾಮಯ್ಯ ಅವರ ಹೇಳಿಕೆಗಳಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ ಎಂದು ಕಾಂಗ್ರೆಸ್ ನಾಯಕರೇ ಹೈಕಮಾಂಡ್ ಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿತ್ತು.
ಇದರ ಮಧ್ಯೆ ಸಿದ್ದರಾಮಯ್ಯ ಮತ್ತೊಂದು ಹೇಳಿಕೆ ನೀಡಿದ್ದು, ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಮತ್ತೆ ನಾನೇ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಹೇಳಿದ್ದಾರೆ. ಬಾದಾಮಿಯಲ್ಲಿ ನಡೆದ ಗ್ರಾಮ ಪಂಚಾಯಿತಿ ನೂತನ ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ವೇಳೆ ಸಿದ್ದರಾಮಯ್ಯ ಈ ಮಾತನಾಡಿದ್ದಾರೆ.
ಸಿದ್ದರಾಮಯ್ಯನವರು ತಾವು ಮುಂದಿನ ಮುಖ್ಯಮಂತ್ರಿಯಾಗುವುದಾಗಿ ಹೇಳುತ್ತಿರುವುದು ವಿರೋಧ ಪಕ್ಷದ ನಾಯಕರ ಜತೆ ಕೆಲ ಸ್ವಪಕ್ಷೀಯರಿಂದಲೇ ಅಸಮಾಧಾನ ವ್ಯಕ್ತವಾಗುತ್ತಿದೆ ಎನ್ನಲಾಗಿದೆ. ವಿರೋಧ ಪಕ್ಷದವರು ಬಹಿರಂಗವಾಗಿಯೇ ಹೇಳಿಕೆ ನೀಡಿದರೆ ಸ್ವಪಕ್ಷೀಯರು ಒಳಗೊಳಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.