alex Certify ಮತ್ತೆ ಮುಖ್ಯಮಂತ್ರಿಯಾಗುವ ಆಸೆ ವ್ಯಕ್ತಪಡಿಸಿದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಮುಖ್ಯಮಂತ್ರಿಯಾಗುವ ಆಸೆ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಬಾಗಲಕೋಟೆ: ನಾನು ಮತ್ತೆ ಮುಖ್ಯಮಂತ್ರಿಯಾಗಿ ಆಯ್ಕೆಯಾದರೆ ಬಡವರಿಗೆ 10 ಕೆ.ಜಿ. ಅಕ್ಕಿ ವಿತರಣೆ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಡವರು ಹೊಟ್ಟೆ ತುಂಬ ಊಟ ಮಾಡಬೇಕು. ರಾಜ್ಯ ಸರ್ಕಾರ 7 ಕೆ.ಜಿ. ಅಕ್ಕಿ ಕೊಟ್ಟಿದ್ದರೆ ಅವರ ಗಂಟು ಹೋಗುತ್ತಿತ್ತಾ? ಒಂದು ವೇಳೆ ನಾನು ಮತ್ತೆ ಸಿಎಂ ಆದರೆ 10 ಕೆ.ಜಿ. ಅಕ್ಕಿ ಕೊಡುತ್ತೇನೆ ಎಂದು ಹೇಳುವ ಮೂಲಕ ಮತ್ತೆ ಸಿಎಂ ಆಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಕೆಳಗಿಳಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅವರೇ ಪ್ರತಿಕ್ರಿಯೆ ನೀಡಬೇಕು. ನಾವು ಸರ್ಕಾರವನ್ನು ಬೀಳಿಸಲು ಹೋಗಲ್ಲ. ಬಿಜೆಪಿಯವರ ತಿಕ್ಕಾಟದಿಂದಾಗಿ ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ಧ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...