
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸಲಿದೆಯಾ ಎಂಬ ಪ್ರಶ್ನೆ ಮೂಡಿದೆ.
ಇಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿ ಮಾಡಬೇಕೇ ಅಥವಾ ಬೇಡವೇ ಎಂಬುದರ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು.
ಆದರೆ ಮುಖ್ಯಮಂತ್ರಿ ಯಡಿಯೂರಪ್ಪನವರು ನಾಳೆ ಬೆಂಗಳೂರಿನ ಶಾಸಕರು, ಸಚಿವರ ಸಭೆ ಕರೆದಿದ್ದು, ಈ ವೇಳೆ ಚರ್ಚೆ ನಡೆಸಿ ಮಹತ್ವದ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.