ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿಅವರ ವಿರುದ್ಧದ ದೂರು ಮರುಸ್ಥಾಪನೆಗೆ ಆದೇಶಿಸಲಾಗಿದೆ.
ಶಿವಮೊಗ್ಗದ ವಕೀಲ ಬಿ. ವಿನೋದ್ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.
ಈ ಹಿಂದೆಯೇ ಈಶ್ವರಪ್ಪ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿದ್ದು, ಇದೀಗ ಈ ದೂರು ಮರುಸ್ಥಾಪನೆಗೆ ಆದೇಶಿಸಲಾಗಿದೆ.