alex Certify ಮದ್ಯ ಮಾರಾಟ ಆರಂಭಕ್ಕೆ ಸಚಿವರಿಂದಲೇ ‘ಅಪಸ್ವರ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯ ಮಾರಾಟ ಆರಂಭಕ್ಕೆ ಸಚಿವರಿಂದಲೇ ‘ಅಪಸ್ವರ’

ಲಾಕ್ ಡೌನ್ ನಡುವೆಯೂ ನಿರ್ಬಂಧಗಳೊಂದಿಗೆ ಕೆಲವೊಂದು ಆರ್ಥಿಕ ಚಟುವಟಿಕೆ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಹೀಗಾಗಿ ರಾಜ್ಯದಲ್ಲಿ ಸೋಮವಾರದಿಂದ ಮದ್ಯದಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿಸಿದೆ.

ಮೊದಲ ದಿನವೇ ಮದ್ಯದ ಭರ್ಜರಿ ವಹಿವಾಟು ನಡೆದಿದ್ದು, ರಾಜ್ಯ ಸರ್ಕಾರಕ್ಕೆ ಒಳ್ಳೆಯ ಆದಾಯ ಬಂದಿವೆ. ಆದರೆ ರಾಜ್ಯದಲ್ಲಿ ಕರೋನಾ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಸಂದರ್ಭದಲ್ಲಿ ಮದ್ಯದಂಗಡಿ ಆರಂಭಕ್ಕೆ ಕೆಲ ಸಚಿವರಿಂದಲೇ ಅಪಸ್ವರ ಕೇಳಿ ಬಂದಿದೆ ಎಂದು ಹೇಳಲಾಗಿದೆ.

ಅಲ್ಲದೆ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ರಾಜ್ಯದಾದ್ಯಂತ ಲಾಕ್ಡೌನ್ ಸಡಿಲಿಕೆ ಮಾಡಿರುವುದಕ್ಕೂ ಈ ಸಚಿವರುಗಳು ಅಸಮಾಧಾನಗೊಂಡಿದ್ದಾರೆಂದು ಹೇಳಲಾಗಿದ್ದು, ಮುಂದಿನ ದಿನಗಳಲ್ಲಿ ಕರೋನಾ ಸೋಂಕು ಸಮುದಾಯಕ್ಕೆ ವ್ಯಾಪಿಸಬಹುದೆಂಬ ಆತಂಕವನ್ನು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...