alex Certify ಮನೆ ಮಾಲೀಕರಿಗೆ ಕರೆಮಾಡಿ ಕ್ಷಮೆ ಯಾಚಿಸಿದ ಸಿಡಿ ಪ್ರಕರಣದ ಯುವತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಮಾಲೀಕರಿಗೆ ಕರೆಮಾಡಿ ಕ್ಷಮೆ ಯಾಚಿಸಿದ ಸಿಡಿ ಪ್ರಕರಣದ ಯುವತಿ

ಸಿಡಿ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದ ಮಾಧ್ಯಮಗಳಲ್ಲಿ ಕುರಿತು ದಿನನಿತ್ಯ ವರದಿಯಾಗುತ್ತಿದ್ದು, ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.

ತಮ್ಮ ಆಪ್ತನ ಮೂಲಕ ರಮೇಶ್ ಜಾರಕಿಹೊಳಿ ದೂರು ದಾಖಲಿಸುತ್ತಿದ್ದಂತೆ ತನಿಖೆ ಚುರುಕು ಪಡೆದುಕೊಂಡಿದೆ. ದೂರು ದಾಖಲಾದ ಸ್ವಲ್ಪ ಹೊತ್ತಿನಲ್ಲೇ ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ ಸಿಡಿ ಪ್ರಕರಣದ ಯುವತಿ, ತನಗೆ ರಮೇಶ್ ಜಾರಕಿಹೊಳಿ ಕೆಲಸ ಕೊಡಿಸುವ ಭರವಸೆ ನೀಡಿದ್ದರು ಎಂದು ಹೇಳಿದ್ದರು.

ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಭಾರೀ ಮುಜುಗರ: ತಲೆ ಬೋಳಿಸಿಕೊಂಡ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಟಿಕೆಟ್ ನಿರಾಕರಿಸಿದ್ದಕ್ಕೆ ಆಕ್ರೋಶ -ರಾಜೀನಾಮೆ

ಇದರ ಮಧ್ಯೆ ಬೆಂಗಳೂರಿನ ಆರ್.ಟಿ. ನಗರದಲ್ಲಿ ತಾನು ವಾಸವಿದ್ದ ಮನೆ ಮಾಲೀಕರಿಗೆ ಕರೆ ಮಾಡಿದ್ದ ಯುವತಿ, ತನ್ನಿಂದ ಆದ ತೊಂದರೆಗೆ ಕ್ಷಮೆ ಯಾಚಿಸುತ್ತೇನೆ. ಸದ್ಯದಲ್ಲೇ ತಾನು ಮನೆ ಖಾಲಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...