ನೈರುತ್ಯ ಮುಂಗಾರು ಚುರುಕಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಇನ್ನು ಕರಾವಳಿ ಭಾಗದಲ್ಲಿ ಸೆಪ್ಟೆಂಬರ್ 19ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಕಳೆದ ನಾಲ್ಕೈದು ದಿನಗಳಿಂದ ವರುಣನ ಅಬ್ಬರ ರಾಜ್ಯದಲ್ಲಿ ಹೆಚ್ಚಾಗಿದೆ. ಮಳೆಯ ಆರ್ಭಟ ಇನ್ನೂ ಕೆಲ ದಿನಗಳ ಕಾಲ ಮುಂದುವರೆಯಲಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡದ ಭಾಗಗಳಲ್ಲಿ ಮಳೆ ಹೆಚ್ಚಾಗಿದೆ. ಅಲ್ಲದೇ ಕರಾವಳಿಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇನ್ನು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಜೋರಾಗಿದೆ. ಸೆ.17ರ ವರೆಗೆ ಉತ್ತರ ಕರ್ನಾಟಕದ 6 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.