alex Certify ಮಳೆ ಕುರಿತು ರಾಜ್ಯದ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆ ಕುರಿತು ರಾಜ್ಯದ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಹಲವೆಡೆ ಮಳೆಯಾಗುತ್ತಿದ್ದು, ಇದೀಗ ಇಂದಿನಿಂದ ಜೂನ್ 1ರವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಮೇ 31 ರಿಂದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ತಿಳಿಸಲಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ ಮೇ 28 ರಿಂದ ಜೂನ್ 1ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...