ರಾಜ್ಯಕ್ಕೆ ಈಗಾಗಲೇ ಮುಂಗಾರು ಕಾಲಿಟ್ಟಿದ್ದು ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, ಇತರ ಜಲಾಶಯಗಳಲ್ಲೂ ನೀರಿನ ಪ್ರಮಾಣ ಹೆಚ್ಚಳವಾಗತೊಡಗಿದೆ.
ಇದರ ಮಧ್ಯೆ ಹವಾಮಾನ ಇಲಾಖೆ ಮಳೆ ಕುರಿತು ಮಹತ್ವದ ಮಾಹಿತಿ ನೀಡಿದ್ದು, ಜೂನ್ 21 ರಿಂದ 25ರವರೆಗೆ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಹೀಗಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಿದ್ದು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾನುವಾರದಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.