ರಾಯಚೂರು: ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ಪ್ರಚಾರ ಕಾರ್ಯವೂ ಸಹ ಆರಂಭವಾಗಿದೆ.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದ ಪ್ರತಾಪ್ ಗೌಡ ಪಾಟೀಲ್ ಬಳಿಕ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು. ಇದೀಗ ಉಪಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
ಗಮನಾರ್ಹ ಸಂಗತಿಯೆಂದರೆ 2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಅಂದಿನ ಕಾಂಗ್ರೆಸ್ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಂದ ಪರಾಭವಗೊಂಡಿದ್ದ ಬಸನಗೌಡ ತುರುವಿಹಾಳ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ.
ಸಿಡಿ ಸದ್ದಿಗೆ ಕಲಾಪ ಬಲಿ; ಕಾಂಗ್ರೆಸ್ ಪ್ರತಿಭಟನೆ; ಜೆಡಿಎಸ್ ಸಭಾತ್ಯಾಗ
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪ್ರತಾಪ್ ಗೌಡ ಪಾಟೀಲ್ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದರೆ, ಅಂದು ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ತುರವಿಹಾಳ ಈಗ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
ಇದು ಉಭಯ ಪಕ್ಷಗಳ ಮುಖಂಡರಿಗೆ ಇರುಸುಮುರುಸು ತಂದಿದ್ದು, ಕಳೆದ ಚುನಾವಣೆಯಲ್ಲಿ ವಿರೋಧಿಸಿದ್ದವರ ಪರವೇ ಈಗಿನ ಉಪ ಚುನಾವಣೆಯಲ್ಲಿ ಪ್ರಚಾರ ಮಾಡಬೇಕಿದೆ.