alex Certify ಮಹಿಳೆಯರು, ಮಕ್ಕಳ ವಿಷಯದಲ್ಲಿ ಸರ್ಕಾರ ಮಾತಿಗೆ ತಪ್ಪಿದೆ: ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರು, ಮಕ್ಕಳ ವಿಷಯದಲ್ಲಿ ಸರ್ಕಾರ ಮಾತಿಗೆ ತಪ್ಪಿದೆ: ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ಕಿಡಿ

ಬೆಂಗಳೂರು: ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಲಾಕ್ ಡೌನ್ ಸಮಯದಲ್ಲಿ ಮಹಿಳಾ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚುವಂತೆ ಮಾಡಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಣಿ ಟ್ವೀಟ್ ಮೂಲಕ ಕಿಡಿ ಕಾರಿರುವ ಕುಮಾರಸ್ವಾಮಿ, ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ ಎಂದಿದ್ದಾರೆ.

ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುತ್ತಿತ್ತು. ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದು ಭರವಸೆ ನೀಡಿದ್ದ ಮುಖ್ಯಮಂತ್ರಿಗಳು ಇದುವರೆಗೂ ಸಾಂತ್ವನ ಕೇಂದ್ರಗಳಿಗೆ ಒಂದು ನಯಾಪೈಸೆ ಬಿಡುಗಡೆ ಮಾಡದಿರುವುದು ಕೋವಿಡ್ ಸಂಕಷ್ಟದಲ್ಲಿ ಮಹಿಳೆಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಈ ಕೂಡಲೇ ಸರ್ಕಾರ ಸಾಂತ್ವನ ಕೇಂದ್ರಗಳಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...