ಮಾಜಿ ಸಚಿವ ಎಚ್.ವೈ. ಮೇಟಿ ಅವರ ಮೊಮ್ಮಗನ ವಿವಾಹ ಆರತಕ್ಷತೆ ಸಮಾರಂಭ ಮಂಗಳವಾರದಂದು ಬೆಂಗಳೂರಿನಲ್ಲಿ ಜರುಗಿತು.
ಎಚ್.ವೈ. ಮೇಟಿ ಅವರ ಮೊಮ್ಮಗ, ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗಂಗೂಬಾಯಿ ಮೇಟಿ ಅವರ ಪುತ್ರ ಅಚ್ಯುತರಾವ್ ಮೇಟಿ ಮತ್ತು ರೇವತಿ ಬೆಳ್ಳೆ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಆರ್. ಶಂಕರ್ ಮೊದಲಾದವರು ಭಾಗವಹಿಸಿ ಶುಭ ಹಾರೈಸಿದರು.