ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅನಾರೋಗ್ಯ ಕಾರಣಗಳನ್ನು ಹೇಳಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಭೈರತಿ ಬಸವರಾಜ್, ರಮೇಶ್ ಜಾರಕಿಹೊಳಿ ತಮಗೆ ಕೊರೊನಾ ಬಂದಿದೆ ಎಂದು ಹೇಳಿದ್ದಾರೆ. ಹೀಗಾಗಿ ಚುನಾವಣಾ ಪ್ರಚಾರಕ್ಕೂ ಅವರು ಬರುತ್ತಿಲ್ಲ ಎಂದರು.
ಕೊರೋನಾ ತಡೆಗೆ ಮಹತ್ವದ ಘೋಷಣೆ, ನೈಟ್ ಕರ್ಫ್ಯೂ ಜಾರಿಗೊಳಿಸಿದ ಮಹಾರಾಷ್ಟ್ರ ಸರ್ಕಾರ
ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಬರುವಂತೆ ರಮೇಶ್ ಜಾರಕಿಹೊಳಿಗೆ ಕರೆ ಮಾಡಿದ್ದೆ. ಆದರೆ ಅವರು ಕೊರೊನಾ ಬಂದಿದೆ. ಹಾಗಾಗಿ ಬರುವುದಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಅವರು ಪ್ರಚಾರಕ್ಕೆ ಬರುವುದೂ ಅನುಮಾನ ಎಂದು ಹೇಳಿದರು.
ಈ ನಡುವೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಎಸ್ ಐ ಟಿ ನೋಟೀಸ್ ನೀಡಿತ್ತು. ಈಗ ಮಾಜಿ ಸಚಿವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದೇ ಆದರೆ ಈಗಲೂ ಕೂಡ ವಿಚಾರಣೆಯಿಂದ ತಪ್ಪಿಸಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ ಎನ್ನಲಾಗಿದೆ.