alex Certify ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ಐವರು ಶಾಸಕರಿಗೆ ಸಮನ್ಸ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ಐವರು ಶಾಸಕರಿಗೆ ಸಮನ್ಸ್ ಜಾರಿ

ಬೆಂಗಳೂರು: ಜೆಡಿಎಸ್ ತೊರೆಯಲು 5 ಕೋಟಿ ರೂಪಾಯಿ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಶ್ರೀನಿವಾಸ್ ಗೌಡ, ಡಿಸಿಎಂ ಅಶ್ವತ್ಥ ನಾರಾಯಣ, ಸಚಿವ ಯೋಗೇಶ್ವರ್, ಎಸ್.ಆರ್. ವಿಶ್ವನಾಥ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ.

ಜೆಡಿಎಸ್ ಪಕ್ಷ ತ್ಯಜಿಸಲೆಂದು ಬಿಜೆಪಿ ನಾಯಕರಿಂದ ಬರೋಬ್ಬರಿ 5 ಕೋಟಿ ರೂಪಾಯಿ ಆಮಿಷವೊಡ್ಡಲಾಗಿತ್ತು ಎಂದು ಆರೋಪಿಸಿ ಟಿ.ಜೆ. ಅಬ್ರಾಹಂ ಖಾಸಗಿ ದೂರು ದಾಖಲಿಸಿದ್ದರು. ಅಲ್ಲದೇ ಈ ಬಗ್ಗೆ ವಿಧಾನಸಭೆಯಲ್ಲಿಯೂ ಕೆ. ಶ್ರೀನಿವಾಸ್ ಗೌಡ ಪ್ರಸ್ತಾಪಿಸಿ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಈ ವಿಷಯ ತಿಳಿಸಿದ್ದಾಗಿ ಹೇಳಿದ್ದರು.

ಸಿಎಂ ಬಿ.ಎಸ್.ವೈ.ಗೆ ಮತ್ತೊಂದು ಸಂಕಷ್ಟ; ಯಡಿಯೂರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

ತಮ್ಮ ಶಾಸಕರಿಗೆ ಬಿಜೆಪಿ 5 ಕೋಟಿ ರೂಪಾಯಿ ಆಮಿಷವೊಡ್ಡಿರುವ ವಿಚಾರ ಗೊತ್ತಿದ್ದರೂ ಹೆಚ್.ಡಿ. ಕುಮಾರಸ್ವಾಮಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ, ಯಾವುದೇ ದೂರು ದಾಖಲಿಸಿ ಅಕ್ರಮ ತಡೆದಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕುಮಾರಸ್ವಾಮಿ ಸೇರಿದಂತೆ 5 ಜನಪ್ರತಿನಿಧಿಗಳ ವಿರುದ್ಧ ಪ್ರಕರಣ ದಾಖಲಿಸಿ, ಸಮನ್ಸ್ ಜಾರಿ ಮಾಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...