ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಣಮುಖರಾಗಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಕುಮಾರಸ್ವಾಮಿ, ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.
ಕೊರೊನಾ ಎಫೆಕ್ಟ್: ಬೀದಿಗೆ ಬಿದ್ದ ಖಾಸಗಿ ಶಾಲಾ ಬಸ್ ಚಾಲಕ – ನಿರ್ವಾಹಕರ ಬದುಕು
ಇನ್ನೂ ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು ಹೇಳಿದ್ದಾರೆ.