ಬುಧವಾರವಷ್ಟೇ ಕೇಂದ್ರ ಸಚಿವ ಸುರೇಶ್ ಅಂಗಡಿ ಕೊರೊನಾದಿಂದಾಗಿ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಇದರ ಬೆನ್ನಲ್ಲೇ ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣ ರಾವ್ ಮಾರಕ ಕೊರೊನಾಗೆ ಬಲಿಯಾಗಿದ್ದಾರೆ.
ಕೊರೊನಾ ಸೋಂಕು ತಗುಲಿದ ಹಿನ್ನಲೆಯಲ್ಲಿ 65 ವರ್ಷದ ನಾರಾಯಣ ರಾವ್ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೆಪ್ಟೆಂಬರ್ 1 ರಂದು ದಾಖಲಾಗಿದ್ದು. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 3-55 ಕ್ಕೆ ವಿಧಿವಶರಾಗಿದ್ದಾರೆ. ಈ ಮೊದಲು ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲೇ ನಿಧನರಾಗಿದ್ದರು. ಬಳಿಕ ಕೇಂದ್ರ ಸಚಿವ ಸುರೇಶ್ ಅಂಗಡಿ ಈ ಮಹಾಮಾರಿಗೆ ಬಲಿಯಾಗಿದ್ದು, ಇದೀಗ ಶಾಸಕ ನಾರಾಯಣ ರಾವ್ ವಿಧಿವಶರಾಗಿದ್ದಾರೆ.