
ಮೀನು ಹಿಡಿಯುವುದನ್ನು ನೋಡಲು ಹೋದ ಪುಟ್ಟ ಮಕ್ಕಳಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
11 ವರ್ಷದ ಪೂಜಾ ಹಾಗೂ ಆಕೆಯ ಸಹೋದರ 9 ವರ್ಷದ ಮಾಲತೇಶ್ ಮೃತಪಟ್ಟವರಾಗಿದ್ದು, ಗುರುವಾರದಂದು ಇವರುಗಳು ಮನೆ ಬಳಿ ಇರುವ ಕೆರೆಯಲ್ಲಿ ಮೀನು ಹಿಡಿಯುವುದನ್ನು ನೋಡಲು ಹೋಗಿದ್ದರು.
ಈ ಸಂದರ್ಭದಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದು, ಇದನ್ನು ಗಮನಿಸಿದವರು ರಕ್ಷಿಸಲು ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.