ಬೆಂಗಳೂರು: ಮೀಸಲಾತಿಗೆ ಆಗ್ರಹಿಸಿ ವಿವಿಧ ಸಮುದಾಯಗಳ ಹೋರಾಟ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತ್ರಿಸದಸ್ಯರ ಉನ್ನತ ಸಮಿತಿ ರಚನೆಗೆ ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ, ವೀರಶೈವ, ಪಂಚಮಸಾಲಿ, ಕುರುಬ, ವಾಲ್ಮೀಕಿ ಸೇರಿದಂತೆ ವಿವಿಧ ಸಮುದಾಯಗಳು ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ನಿವೃತ್ತ ಮೂವರು ನ್ಯಾಯಮೂರ್ತಿಗಳ ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದರು.
ಇಂಥ ಮಾನಗೆಟ್ಟ ಸರ್ಕಾರ ನಮಗೆ ಬೇಕಾ…..? ಸಿದ್ದರಾಮಯ್ಯ ಪ್ರಶ್ನೆ
ಪಂಚಮಸಾಲಿ ಲಿಂಗಾಯಿತ ಸಮುದಾಯ ವಿಚಾರದಲ್ಲಿ ನಾಗಮೋಹನ ದಾಸ್ ವರದಿ ನೀಡಿದ್ದಾರೆ. ಹಾಲುಮತ, ಒಕ್ಕಲಿಗ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ಬಂದಿದೆ. ಶೇ.50ಕ್ಕಿಂತ ಮೀಸಲಾತಿ ಹೆಚ್ಚಾಗಬಾರದು ಎಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ. ಸಂದಿಗ್ಧ ಸಂದರ್ಭದಲ್ಲಿ ನಮಗೂ ಮಾರ್ಗದರ್ಶನದ ಅಗತ್ಯವಿದ್ದು, ನಿವೃತ್ತ ನ್ಯಾಯಮೂರ್ತಿಗಳ ತ್ರಿಸದಸ್ಯ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.