ರಾಜ್ಯದಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆಗಿದ್ದು, ಮುಂಗಾರು ಮಳೆಯೂ ರೈತರಿಗೆ ಅನುಕೂಲಕರವಾಗಲಿದೆ ಎಂದು ಹೇಳಲಾಗಿತ್ತು. ಅಲ್ಲದೆ ಜೂನ್ 1ರಂದು ಕೇರಳ ಪ್ರವೇಶಿಸಿರುವ ಮುಂಗಾರು, ರಾಜ್ಯಕ್ಕೆ ಎರಡು ದಿನಗಳಲ್ಲಿ ಪ್ರವೇಶಿಸಲಿದೆ ಎಂದು ತಿಳಿಸಲಾಗಿತ್ತು.
ಆದರೆ ಈವರೆಗೂ ರಾಜ್ಯಕ್ಕೆ ಮುಂಗಾರು ಮಳೆಯ ಪ್ರವೇಶವಾಗಿಲ್ಲ. ಶೀಘ್ರದಲ್ಲೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ತಿಳಿಸಲಾಗಿದೆ. ಜೊತೆಗೆ ಈ ಬಾರಿ ಉತ್ತಮ ಮಳೆಯಾಗುವ ಕಾರಣ ಜಲಾಶಯ, ಕೆರೆಕಟ್ಟೆಗಳು ತುಂಬಲಿದೆ ಎಂದು ಹೇಳಲಾಗುತ್ತಿದೆ.
ರಾಜ್ಯದ ಕೆಲವು ಭಾಗಗಳಲ್ಲಿ ಬುಧವಾರದಿಂದ ಮಳೆಯಾಗುತ್ತಿದ್ದು, ಇದು ನಿಸರ್ಗ ಚಂಡಮಾರುತದ ಪರಿಣಾಮ ಎಂದು ಹೇಳಲಾಗಿದೆ. ಹೀಗಾಗಿ ಕರಾವಳಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿತ್ತು.