ಮುಂಗಾರು ಮಳೆಯ ನಿರೀಕ್ಷೆಯಲ್ಲಿ ರಾಜ್ಯದ ರೈತರು ಪೂರಕ ಕೃಷಿ ಚಟುವಟಿಕೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಮುಂಗಾರು ಪೂರ್ವ ಮಳೆಯೂ ಸಹ ಉತ್ತಮವಾಗಿ ಆಗಿದ್ದು, ನೈಋತ್ಯ ಮುಂಗಾರು ಈಗಾಗಲೇ ರಾಜ್ಯವನ್ನು ಪ್ರವೇಶಿಸಿದೆ.
ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಜೂನ್ 9 ರ ನಂತರ ಇದು ಬಿರುಸುಗೊಳ್ಳಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಈ ಬಾರಿ ಮುಂಗಾರು ಮಳೆ ಉತ್ತಮವಾಗಿರಲಿದೆ ಎಂದು ಹೇಳಲಾಗಿದೆ.
ಕೇರಳ ಮೂಲಕ ಜೂನ್ 4 ರಂದು ಕರಾವಳಿಯನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು ಈಗ ದಕ್ಷಿಣ ಒಳನಾಡನ್ನು ಆವರಿಸಿವೆ. ಹೀಗಾಗಿ ಕೆಲದಿನಗಳಿಂದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದು ಬಿರುಸುಗೊಳ್ಳಲಿದೆ ಎಂದು ತಿಳಿದುಬಂದಿದೆ.