ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಧಾರ್ಮಿಕ ಮಂದಿರಗಳು ಬಂದ್ ಆಗಿದ್ದ ಕಾರಣ ಮುಜರಾಯಿ ದೇವಾಲಯಗಳ ಅರ್ಚಕರು ಹಾಗೂ ಸಿಬ್ಬಂದಿ ಸಂಕಷ್ಟಕ್ಕೊಳಗಾಗಿದ್ದರು.
ಇದೀಗ ಲಾಕ್ಡೌನ್ ತೆರುವುಗೊಂಡು ದೇವಾಲಯಗಳು ಆರಂಭಗೊಂಡರೂ ಸಹ ಕೊರೊನಾ ಭೀತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿಲ್ಲ.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮುಜರಾಯಿ ದೇವಾಲಯಗಳ ಅರ್ಚಕರಿಗೆ ಮತ್ತು ಡಿ ದರ್ಜೆ ನೌಕರರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ.
ಇವರುಗಳಿಗೆ ಆರೋಗ್ಯ ವಿಮೆ ಹಾಗೂ ಜೀವ ವಿಮೆ ಸೌಲಭ್ಯ ಒದಗಿಸುವ ಕುರಿತು ಚಿಂತನೆ ನಡೆದಿದ್ದು, ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.