ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಕೂಟವು ಏಪ್ರಿಲ್ 7ರಿಂದ ಮುಷ್ಕರ ನಡೆಸಲು ಮುಂದಾಗಿದ್ದು, ಇದಕ್ಕೆ ಸೆಡ್ಡು ಹೊಡೆದಿರುವ ರಾಜ್ಯ ಸರ್ಕಾರ ಖಾಸಗಿ ವಾಹನಗಳಿಗೆ ತಾತ್ಕಾಲಿಕ ಪರ್ಮಿಟ್ ನೀಡಲು ನಿರ್ಧರಿಸಿದೆ.
6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ನೌಕರರ ಕೂಟವು ಸರ್ಕಾರದ ಮುಂದಿಟ್ಟಿದ್ದು, ಏಪ್ರಿಲ್ 7ರಿಂದ ಮುಷ್ಕರ ನಡೆಸುವುದಾಗಿ ನಾಲ್ಕು ನಿಗಮಗಳು ಹಾಗೂ ಸರ್ಕಾರಕ್ಕೆ ಈಗಾಗಲೇ ನೋಟಿಸ್ ನೀಡಿದೆ.
ಕೊರೋನಾ ತಡೆಗೆ ಮತ್ತೊಂದು ಮಹತ್ವದ ನಿರ್ಧಾರ: ಎಲ್ಲರಿಗೂ ಲಸಿಕೆ..?
ಹೀಗಾಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಾರಿಗೆ ಸೌಲಭ್ಯ ಕಲ್ಪಿಸಲು ಮುಂದಾಗಿರುವ ರಾಜ್ಯ ಸರ್ಕಾರ ಇದಕ್ಕಾಗಿ ಒಪ್ಪಂದ ವಾಹನಗಳು, ಮಿನಿಬಸ್, ಮ್ಯಾಕ್ಸಿಕ್ಯಾಬ್ ಗಳಿಗೆ ತಾತ್ಕಾಲಿಕ ಪರ್ಮಿಟ್ ನೀಡಲು ಮುಂದಾಗಿದ್ದು, ಆಸಕ್ತಿಯುಳ್ಳ ವಾಹನ ಮಾಲೀಕರು ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.