ಚಿತ್ರದುರ್ಗ: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಇದು ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯದಲ್ಲಿ ಪ್ರತಿಭಟನೆಯ ಬಿಸಿ ಇನ್ನಷ್ಟು ಹೆಚ್ಚುವ ಲಕ್ಷಣಗಳು ಕಾಣುತ್ತಿವೆ.
ಕೆಲಸಕ್ಕೆ ಹಾಜರಾಗುವಂತೆ ನೋಟೀಸ್ ಕೊಟ್ಟರೂ ಕೂಡ ಬಗ್ಗದ ಸಾರಿಗೆ ಸಿಬ್ಬಂದಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾತ್ಮಕ ಕಾರಣ ನೀಡಿ ಚಿತ್ರದುರ್ಗ ವಿಭಾಗದ 10 ನೌಕರರನ್ನು ರಾಮನಗರಕ್ಕೆ ವರ್ಗಾವಣೆ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಕರ್ತವ್ಯಕ್ಕೆ ಹಾಜರಾಗದ ತಾಂತ್ರಿಕ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಈ ಕ್ರಮವನ್ನು ಖಂಡಿಸಿ ಇದೀಗ ಸಾರಿಗೆ ನೌಕರರ ಕುಟುಂಬಸ್ಥರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಬಂಕ್ ನಲ್ಲಿ ಪೆಟ್ರೋಲ್ ಹಾಕಿಸುವಾಗಲೇ ನಡೆದಿದೆ ಆಘಾತಕಾರಿ ಘಟನೆ
ಕುಟುಂಬಸ್ಥರ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಸಾಥ್ ನೀಡಿವೆ. ಇದರ ಬೆನ್ನಲ್ಲೇ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.